June 19, 2025

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}

ಬೀದರ:- ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ವಿಮಾನಗಳ ಏರೋಬ್ಯಾಟಿಕ್ ಟೀಂ ನಿಂದ ಬೀದರ ಕೋಟೆಯ ಮೇಲೆ ಶನಿವಾರ ಆಕರ್ಷಕ ಏರ್ ಶೋ ಜರುಗಿತು. ಸೂರ್ಯಕಿರಣ ವಿಮಾನಗಳ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರ ಕಣ್ಮನ ಸೆಳೆದವು. ಬೀದರ ಕೋಟೆಯ ಮೇಲೆ ಲೋಹದ ಹಕ್ಕಿಗಳ ಕಲರವ ಮತ್ತು ಕಸರತ್ತು ನೋಡಿ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರಕಾರ ನೌಕರರು ಖುಷಿ ಪಟ್ಟರು.

ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಒಂದಾನೊAದು ಎದುರಿಗೆ ಕ್ರಾಸಿಂಗ್. ಬ್ಯಾರಲ್ ರೋಲ್. ರಾಷ್ಟ್ರ ಧ್ವಜದ ಕೇಸರಿ. ಬಿಳಿ. ಹಸಿರು ಬಣ್ಣದ ಚಿತ್ರಗಳನ್ನು ಬಿಡುಸುವ ಮೂಲಕ ನೋಡುಗರನ್ನು ಮೂಕವಿಸ್ಮಿತರನ್ನಾಗಿ ಮಾಡುವ ಮೂಲಕ ಆಕಾಶದಲ್ಲಿ ಚಿತ್ತಾರಗಳನ್ನು ಮೂಡಿಸಿದವು. ಕೆಲವೊಂದು ಸಲ ಒಂಟಿಯಾಗಿ. ಜೋಡಿಯಾಗಿ ಮತ್ತು ತಂಡವಾಗಿ ಬರುತ್ತಿದ್ದ ವಿಮಾನಗಳು ಯಾವ ದಿಕ್ಕಿನಿಂದ ವಿಮಾನಗಳು ಆಕಾಶದಲ್ಲಿ ಬರುತ್ತಿವೆ ಎನ್ನುವುದನ್ನು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದರು.

1996 ರಲ್ಲಿ ಆರಂಭಿಸಲಾದ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ ಶ್ರೀಲಂಕಾ. ಸಿಂಗಾಪುರ್. ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600 ಕ್ಕಿಂತಲೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿವೆ. 9 ವಿಮಾನಗಳ ಈ ಏರಕ್ರಾಪ್ಟ್ ಟೀಂ ಇಡೀ ಏಷ್ಯಾ ಖಂಡದ ಭಾರತದಲ್ಲಿ ಮಾತ್ರ ಇರುವುದು. ಈ ಲೋಹದ ಹಕ್ಕಿಗಳು ಆಕಾಶದಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು.

ಸೆಪ್ಟೆAಬರ್ 21 ರಂದು ಶನಿವಾರ ಬೀದರ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮ ಬೀದರ ನಗರದ ಎಲ್ಲಾ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಹೆಚ್ಚಿನ ಜನರು ಈ ಏರ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಆನಂದವನ್ನು ಸವಿದರು.

ಏರ್ ಶೋ ಕಾರ್ಯಕ್ರಮದಲ್ಲಿ ಬೀದರ ನಗರಸಭೆ ಅಧ್ಯಕ್ಷರಾದ ಮೋಹ್ಮದ್ ಗೌಸ್ . ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ. ಏರ್ ಫೋರ್ಸ್ ಸ್ಟೇಷನ್ ಬೀದರನ ಕಮೊಡೊರ್ ಪರಾಗಲಾಲ್. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ. ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರು.ಏರ್ ಪೋರ್ಸ ಸ್ಟೇಷನ್ ಬೀದರ ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರು. ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.

 

1 thought on “ಬೀದರ ಕೋಟೆಯ ಮೇಲೆ ಸೂರ್ಯಕಿರಣ ವಿಮಾನಗಳಿಂದ ಆಕರ್ಷಕ ಏರ್ ಶೋ

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771