
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;
ಔರಾದ:-ಪಂಡಿತ ದೀನ್ ದಯಾಳ ಉಪಾಧ್ಯಾಯರು ಉದ್ದಾಂತ ಚಿಂತಕರಾಗಿದ್ದರು. ಅವರ ತತ್ವಾದರ್ಶಗಳು ಮತ್ತು ಚಿಂತನೆಗಳನ್ನು ನಾವೆಲ್ಲರೂ ಅನುಸರಿಸಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.
ಔರಾದ(ಬಿ) ತಾಲ್ಲೂಕಿನ ಘಮಸುಬಾಯಿ ತಾಂಡಾದಲ್ಲಿರುವ ಗೃಹ ಕಛೇರಿಯಲ್ಲಿ ಸೆ.25ರಂದು ಏರ್ಪಡಿಸಿದ್ದ ಪಂಡಿತ ದೀನ್ ದಯಾಳ ಉಪಾಧ್ಯಾಯರ ಜಯಂತಿಯ ನಿಮಿತ್ತ ಉಪಾಧ್ಯಾಯರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಪಂಡಿತ ದೀನ್ ದಯಾಳ ಉಪಾಧ್ಯಾಯರು ಅಪಾರ ದೇಶಪ್ರೇಮವನ್ನು ಹೊಂದಿದ್ದರು. ದೇಶ ಮೊದಲು ಎನ್ನುವುದನ್ನು ಪ್ರತಿಪಾದಿಸುತ್ತಿದ್ದ ಅವರು ದೇಶದ ಹಿತಕ್ಕಾಗಿ ಕೆಲಸ ಮಾಡಬೇಕೆಂದು ಹೇಳುತ್ತಿದ್ದರು. ಅಖಂಡ ಭಾರತದ ಸಂಕಲ್ಪ ಹೊಂದಿದ್ದ ಉಪಾಧ್ಯಾಯರು ಅಂದಿನ ದಿನಗಳಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಸಿದ್ದಾಂತಗಳನ್ನು ಧಿಕ್ಕರಿಸಿ ಪಕ್ಷವನ್ನು ತೊರೆದು ದೇಶದಲ್ಲಿ ಜನಸಂಘ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಅವರ ಸಾಧನೆಗಳನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಗುರುನಾಥ ರಾಜಗೀರಾ, ಬಂಟಿ ರಾಂಪೂರೆ, ಸಂಜು ಮುರ್ಕೆ, ರವೀಂದ್ರ ರೆಡ್ಡಿ, ಸಚಿನ ಬಿರಾದಾರ, ಉದಯ ಸೋಲಾಪೂರೆ, ರಾಜಕುಮಾರ ಸೋರಾಳೆ, ಪ್ರದೀಪ ಪವಾರ್, ಸುಜಿತ ರಾಠೋಡ್ ಸೇರಿದಂತೆ ಇತರರು ಉಪಸ್ಥಿತರಿದ್ದರು.