
ಔರಾದ:- ಮಹಿಳೆಯರು ತಮ್ಮ ಜತೆಗೆ ಮಕ್ಕಳನ್ನು ಆರೋಗ್ಯವಂತರನ್ನಾಗಿಸುವ ಮೂಲಕ ಸ್ವಾಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು
ಎಕಂಬಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಂದ ಕಿಶೋರ್ ಹೇಳಿದರು.
ಎಕಂಬಾ ಗ್ರಾಮದ ಗಣಪತಿ ದೇವಸ್ಥಾನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಇಲಾಖೆಯಿಂದ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಪೌಷ್ಟಿಕತೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನ ಒಂದು ಮಹತ್ತರ ಕಾರ್ಯಕ್ರಮ. ಕಿಶೋರಿ ಬಾಲಕಿಯರಿಂದ ಹಿಡಿದು ಗರ್ಭಿಣಿಯರು ಸೇರಿದಂತೆ ಮಹಿಳೆಯರು ಮತ್ತು ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸುವ ಕಾರ್ಯಕ್ರಮ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎಮ್ .ಡಿ. ಖಲೀಲ.ಇವರು ಮಾತನಾಡುತ್ತಾ
ಮಹಿಳೆಯರು ಪೋಷಣ್ ಅಭಿಯಾನದಡಿ ದೊರೆಯುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದುಪಯೋಗಪಡಿಸಿಕೊಳ್ಳಬೇಕು.
ಈ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮೇಲ್ಚಚಾರಕಿ ಶೋಭಾವತಿ,ಸಿಐಟಿಯು ಸಂಘಟನೆಯ ತಾಲೂಕ ಅಧ್ಯಕ್ಷರು ಪದ್ಮಾವತಿ ಸ್ವಾಮಿ, ಖಜಾಂಚಿ ಸುದೆಶೆನಾ ಬಿರಾದರ, ನಿವೃತ್ತ ಅಂಗನವಾಡಿ ಶಿಕ್ಷಕಿ ಅಂಜನಾಬಾಯಿ ಅಮರವಾಡಿ,ಮತ್ತು ಮಧೋಳ ವಲಯದ ಎಲ್ಲಾ ಅಂಗನವಾಡಿ ಶಿಕ್ಷಕಿಯರು, ವಲಯದ ಮುಖಂಡರು ದ್ರಾಕ್ಷಿಣಿ,ರಂಜನಾ, ನರಸಮ್ಮಾ,ವಿಮಲಾಬಾಯಿ,ಲಕ್ಷಿ, ಹಾಗೂ ಅಂಗನವಾಡಿ ಸಹಾ ಯಕಿಯರು,ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿ ಯರು ಉಪಸ್ಥಿತರಿದ್ದರು.