
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
ಲಔರಾದ:-ಮಕ್ಕಳನ್ನು ಪೋಷಿಸಿ, ಅಕ್ಷರಜ್ಞಾನ ನೀಡುವ ಅಂಗನವಾಡಿ ಕೇಂದ್ರಗಳು ಮಕ್ಕಳಿಗೆ ಎರಡನೇ ತಾಯಿಯ ರೂಪದಲ್ಲಿ ಕೆಲಸ ಮಾಡುತ್ತವೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂತಪೂರ ವತಿಯಿಂದ ಔರಾದ(ಬಿ) ಪಟ್ಟಣದ ಡಾ.ಗುರುಪಾದಪ್ಪಾ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಸೆ.30ರಂದು ಜರುಗಿದ ಪೋಷಣ ಅಭಿಯಾನ ಮಾಸಾಚರಣೆಯ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಂಗನವಾಡಿ ಕೇಂದ್ರಗಳು ಶಿಕ್ಷಣಕ್ಕೆ ಅಡಿಪಾಯವಿದ್ದಂತೆ. ಸಂಸ್ಕಾರದ ಕಲಿಕೆ ಇಲ್ಲಿಂದಲೇ ಆರಂಭವಾಗುವುದರಿAದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಅತ್ಯಂತ ಜವಾಬ್ದಾರಿಯುತವಾದದ್ದು. ಸರ್ಕಾರವು ಮಹಿಳೆಯರು ಮತ್ತು ಮಕ್ಕಳಿಗಾಗಿ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳ ಮುಖಾಂತರ ವಿತರಿಸುವುದರಿಂದ ಈ ಸೌಲಭ್ಯಗಳು ಎಲ್ಲ ಫಲಾನುಭವಿಗಳಿಗೆ ಪ್ರಮಾಣಿಕವಾಗಿ ತಲುಪಿಸಬೇಕು ಎಂದರು.
ಚುನಾವಣೆ, ಜನಗಣತಿ, ಆರೋಗ್ಯ ಕಾರ್ಯಕ್ರಮಗಳು ಹೀಗೆ ಪ್ರಮುಖ ಕೆಲಸಗಳಿಗೆ ಅಂಗನವಾಡಿ ಸಿಬ್ಬಂದಿಯ ಸೇವೆಯನ್ನು ಪಡೆಯಲಾಗುತ್ತದೆ. ಕೋವಿಡ್‌ನಂತಹ ಸಂಕಷ್ಟದ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ಜೀವವನ್ನು ಲೆಕ್ಕಿಸದೇ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಶಿಕ್ಷಕರ ದಿನಾಚರಣೆಯಂದು ಪ್ರತಿ ವರ್ಷ ಸನ್ಮಾನಿಸುತ್ತಾ ಬರುತ್ತಿದ್ದೇನೆ. ಈ ವರ್ಷ ಪ್ರತ್ಯೇಕ ಕಾರ್ಯಕ್ರಮದಲ್ಲಿ ಸನ್ಮಾನಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಕಲಿಕಾಭ್ಯಾಸ ಮಾಡಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅವೆಲ್ಲವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಮಹಿಳೆಯರು ಮತ್ತು ಮಕ್ಕಳಿಗಾಗಿ ಬರುವ ಪೌಷ್ಠಿಕ ಆಹಾರವನ್ನು ಸರಿಯಾಗಿ ವಿತರಿಸಬೇಕು ಎಂದು ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ಬಾಲ್ಯವಿವಾಹಗಳು ಹೆಚ್ಚಿನ ಪ್ರಮಾಣದಲ್ಲಿ ಜರುಗುತ್ತಿವೆ. ಬಾಲ್ಯವಿವಾಹದಿಂದಾಗಿ ಸಾಕಷ್ಟು ಸಮಸ್ಯೆಗಳು ಎದುರಾಗುವುದರಿಂದ ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಮರ್ಪಕ ಕುಡಿಯುವ ನೀರು, ಶೌಚಾಲಯ, ಕಂಪೌAಡ್ ಗೋಡೆ ಕಡ್ಡಾಯವಾಗಿ ಇರಬೇಕು. ಈ ದಿಶೆಯಲ್ಲಿ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒದಗಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಇರುವುದಿಲ್ಲ. ಕ್ಷೇತ್ರದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಹೈಟೆಕ್ ಮಾಡುವ ಪ್ರಯತ್ನಗಳು ನಡೆದಿವೆ. ಇದಕ್ಕೆ ಅಧಿಕಾರಿಗಳು ಸಹಕಾರ ಬೇಕು ಎಂದು ಹೇಳಿದರು.
ಪರಿಶ್ರಮ ವಹಿಸಿ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸಂಬಳ ಹೆಚ್ಚಿಸಬೇಕು ಎಂಬುದು ನನ್ನ ಅಭಿಲಾಶೆಯೂ ಆಗಿದೆ. ನಿಮ್ಮ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ತಿಳಿಸಿದ ಅವರು, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಐಎಎಸ್, ಐಪಿಎಸ್ ನಂತಹ ಉನ್ನತ ಹುದ್ದೆಗಳನ್ನು ಪಡೆಯಲು ಪ್ರೇರೇಪಿಸಬೇಕು. ಯಾವುದೇ ರೀತಿಯ ಸಮಸ್ಯೆ ಎದುರಾದರೆ ನಿಮ್ಮ ಸಹಕಾರಕ್ಕೆ ನಾನು ಸದಾ ಸಿದ್ದನಿದ್ದೇನೆ ಎಂದು ಅಭಯ ನೀಡಿದರು.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ಪ್ರಭು ಎಂಟರ್‌ಪ್ರೆöÊಸೆಸ್ ವತಿಯಿಂದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ವಿಶೇಷ ಸನ್ಮಾನ ನಡೆಯಿತು. ಶಾಸಕರು ಎಲ್ಲರನ್ನು ಶಾಲು, ಹೂ ಹಾರಗಳೊಂದಿಗೆ ಗೌರವ ಕಾಣಿಕೆ ನೀಡಿ ಅಭಿನಂದಿಸಿದರು.
ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, 6 ತಿಂಗಳ ಮಕ್ಕಳಿಗೆ ಅನ್ನಪ್ರಾಶನ, ಸುಕನ್ಯಾ ಸಮೃದ್ಧಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪಾಸ್‌ಬುಕ್ ವಿತರಣೆ, ಪೋಷಣ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಔರಾದ(ಬಿ) ಪಟ್ಟಣ ಪಂಚಾಯತ ಅಧ್ಯಕ್ಷರಾದ ಸರುಬಾಯಿ ಘೂಳೆ, ಎಪಿಎಂಸಿ ಅಧ್ಯಕ್ಷರಾದ ಧೊಂಡಿಬಾ ನರೋಟೆ, ತಹಸೀಲ್ದಾರ ಮಲಶೆಟ್ಟಿ ಚಿದ್ರೆ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸ್ವಾಮಿದಾಸ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಿ.ಕೆ ಇಮಲಪಾ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಅಬ್ದುಲ್ ಖದೀರ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದ್ಮಾವತಿ ಸ್ವಾಮಿ, ಶಾರದಾ, ಭಾಗ್ಯವತಿ ಸೇರಿದಂತೆ ಔರಾದ(ಬಿ) ಹಾಗೂ ಕಮಲಗರ ತಾಲ್ಲೂಕಿನ ವಿವಿಧ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.