
ಬೀದರ:- ಕೃಷಿ ಇಲಾಖೆಯಿಂದ ನಡೆಯುವ ಕೇಂದ್ರ ಪುರಸ್ಕೃತ ಯೋಜನೆಗಳಾದ ರಾಷ್ಟಿçÃಯ ಆಹಾರ ಭದ್ರತಾ ಯೋಜನೆ, ರಾಷ್ಟಿçÃಯ ಖ್ಯಾದ ತೈಲ್ ಅಭಿಯಾನ, ಕೃಷಿಯಂತ್ರೋಪಕರಣ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಇನ್ನೀತರ ಯೋಜನೆಗಳ ಕುರಿತು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ವತಿಯಿಂದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ, ರೈತರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಬೀದರ ಲೊಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ ಸೂಚಿಸಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ ಬೀದರ, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಫಸಲ ಭಿಮಾ ಯೋಜನೆಯಡಿ ಇನ್ನು ಬಾಕಿ ಉಳಿದ ರೈತರ ಬೆಳೆ ಹಾನಿ ಪರಿಹಾರ ಶೀಘ್ರದಲ್ಲಿ ರೈತರಿಗೆ ತಲುಪುವಂತೆ ನೋಡಿಕೊಳ್ಳಬೇಕು. ರೈತರಿಂದ ಬೆಳೆ ವಿಮಾ ಕಂಪನಿಗಳ ಮೇಲೆ ಅನೇಕ ದೂರುಗಳು ಬಂದಿದ್ದು ಕೂಡಲೇ ಸರಿಪಡಿಸುವಂತೆ ವಿಮಾ ಕಂಪನಿದಾರರಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳಡಿ ಅನೇಕ ಯೋಜನೆಗಳಿದ್ದು ಅವುಗಳನ್ನು ಅನುಷ್ಠಾನಕ್ಕೆ ತಂದು ಅದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಔರಾದ, ಬೀದರ ರಾಷ್ಟಿçÃಯ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದ್ದು, ಈ ರಸ್ತೆ ಕಾಮಗಾರಿ ನಿರ್ವಹಣೆ ಸರಿಯಾಗಿ ಆಗಿಲ್ಲ ಅದನ್ನು ಪರಿಶೀಲಿಸಿ 15 ದಿನಗಳಲ್ಲಿ ಮಾಹಿತಿ ನೀಡಲು ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು. ಇದರೊಂದಿಗೆ ಆಳಂದ, ಚಿಂಚೋಳಿ ತಾಲ್ಲೂಕುಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾತನಾಡಿ, ರಾಜ್ಯ ಸರ್ಕಾರದಿಂದ ಭಾಲ್ಕಿ ನಿಲಂಗಾ, ನೌಬಾದ-ಕಮಲನಗರ, ನೌಬಾದ-ಹುಮನಾಬಾದ, ರಸ್ತೆಗಳು ರಾಜ್ಯ ಸರ್ಕಾರದಿಂದ ಮೇಲ್ದರ್ಜೆಗೆರಿಸಿದ್ದು, ರಸ್ತೆ ನಿರ್ಮಾಣ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದು ಕೂಡಲೇ ಗುಣಮಟ್ಟ ಪರೀಕ್ಷೆ ಮಾಡಿ ತಪ್ಪಿಸ್ಥರ ವಿರದ್ದು ಕ್ರಮ ಕೈಗೊಂಡು ವರದಿ ನೀಡಿ ನೀಡುವಂತೆ (ರಾಷ್ಟಿçÃಯ ಹೆದ್ದಾರಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಔರಾದ ತಾಲ್ಲೂಕಿನ ಹೆಡಗಾಪೂರ ಗ್ರಾಮದಲ್ಲಿ 1 ಸರ್ಕಾರಿ ಗೋಶಾಲೆ ಇದ್ದು, 9 ಖಾಸಗಿ ಗೋಶಾಲೆಗಳು ಇವೆ ಅದರಲ್ಲಿ ಜಾನುವಾರು ಸಂಖ್ಯೆಯು ಕಡಿಮೆಯಾಗಿದೆ. ಆದರೆ ರಸ್ತೆಗಳ ಮೇಲೆ ಬೀಡಾಡಿ ಧನಗಳು ಓಡಾಡುತ್ತಿರುವುದರಿಂದ ರಸ್ತೆ ಅಪಘಾತಗಳು ಆಗುತ್ತಿವೆ. ಕೂಡಲೆ ಸ್ಥಳೀಯ ಸಂಸ್ಥೆಗಳು, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಸೇರಿಕೊಂಡು ಅವುಗಳನ್ನು ಹಿಡಿದು ಗೋಶಾಲೆಗಳಿಗೆ ಬಿಡುವಂತೆ ಕ್ರಮ ವಹಿಸಬೇಕು ಎಂದು ಹೇಳಿದರು.
ಈ ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ಜ ಸಚಿವರಾದ ರಹೀಂಖಾನ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗೀರಿಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟೆ, ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ., ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಸೇರಿದಂತೆ ಜಿಲ್ಲಾ ಮಟ್ಟದ ಮತ್ತು ತಾಲ್ಲುಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.