
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
ಬೀದರ:- ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸೆ, ಸತ್ಯ ಮತ್ತು ಸರಳತೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಾತ್ಮ ಗಾಂಧೀಜಿಯವರು ಶಾಂತಿಯ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ತಂದು ಕೊಟ್ಟು, ನುಡಿದಂತೆ ನಡೆದರು ಹಾಗಾಗಿ ಅವರನ್ನು ನಾವು ರಾಷ್ಟ್ರಪಿತ ಎಂದು ಕರೆಯುತ್ತೆವೆ. ಎಲ್ಲರಿಗೂ ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿಯವರ ಜನ್ಮ ದಿನದ ಶುಭಾಶಯಗಳು ಎಂದು ಹೇಳಿದರು.
ಸ್ವಚ್ಚತೆಯ ಬಗ್ಗೆ ನಾವೆಲ್ಲರೂ ಗಮನ ಹರಿಸಬೇಕು. ನಮ್ಮ ಮನೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆ ಕಾಪಾಡಬೇಕು. ಈ ಕುರಿತು ನಮ್ಮ ಅಕ್ಕ-ಪಕ್ಕದ ಜನರಿಗೂ ಸ್ವಚ್ಚತೆ ಕಾಪಾಡುವಂತೆ ತಿಳಿಹೇಳಬೇಕು. ಸ್ಬಚ್ವ ಪರಿಸರದಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಆರ್.ವ್ಹಿ. ಬಿಡಪ ಕಾನೂನು ಮಹಾವಿದ್ಯಾಲಯ ಬೀದರ ಸಹಾಯಕ ಪ್ರಾಧ್ಯಾಪಕರಾದ ಗಣಪತಿ ಟಿ. ಅವರು ಗಾಂಧೀಜಿಯವರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ ಮಹಾತ್ಮ ಗಾಂಧಿಯವರು ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಟ ಮಾಡಿದ್ದರು. ಭಾರತದಲ್ಲಿ ದಂಡಿ ಸತ್ಯಾಗ್ರಹ, ಅಸಹಕಾರ ಚಳುವಳಿ, ಕ್ಚಿಟ್ ಇಂಡಿಯಾ ಚಳುವಳಿ ಸೇರಿದಂತೆ ಹಲವಾರು ಹೋರಾಟಗಳನ್ನು ಮಾಡುವ ಮೂಲಕ ನಮ್ಮ ದೇಶದ ಸ್ವಾತಂತ್ರ‍್ಯ ಹೋರಾಟದ ಅವರ ಕೊಡುಗೆ ಅಪಾರವಾಗಿದೆ. ಅವರು ದೇಶಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಯುವ ಜನರು ತಿಳಿದುಕೊಳ್ಳಬೇಕಿದೆ ಎಂದು ಹೇಳಿದರು.
ಸ್ವಚ್ಚತೆಯ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಎಲ್ಲರಿಗೂ ಭೋದಿಸಿದರು. ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ವತಿಯಿಂದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಮಕ್ಕಳಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ಪತ್ರಗಳನ್ನು ನೀಡಿ ಸನ್ಮಾನಿಸಲಾಯಿತು. ಬೆಳಿಗ್ಗೆ ಸ್ವಚ್ಚತಾ ನಡಿಗೆ ಕಾರ್ಯಕ್ರಮ ಬೀದರ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ ಸಹಾಯಕ ಆಯುಕ್ತರಾದ ಮಹಮ್ಮದ ಶಕೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾAತ ಶಹಾಬಾದಕರ್, ಯೋಜನಾ ನಿರ್ದೇಶಕರಾದ ಮೋತಿಲಾಲ ಲಮಾಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುರೇಶ ಜಿ. ಜಿಲ್ಲಾಧಿಕಾರಿಗಳ ಕಚೇರಿಯ ಕಿರಣಕುಮಾರ, ಶ್ರೀಕಾಂತ, ವಾರ್ತಾ ಇಲಾಖೆಯ ವಿಜಯಕೃಷ್ಣ, ನರೇಶ, ತನ್ವೀರ, ಗೀತಮ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ವಿವಿಧ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.