
ಔರದ:ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದುರ್ ಶಾಸ್ತ್ರಿಯವರ ಜಯಂತಿಯ ಪ್ರಯುಕ್ತ ಗ್ರಾಮ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ ತಪಾಸಣೆ ಮಾಡಲಾಯಿತು.
ಬಾದಲಗಾಂವ ಪಂಚಾಯತನಲ್ಲಿ ಪಂಚಾಯತ ಗ್ರಾಮ ಅಭಿವೃದ್ಧಿ ಅಧಿಕಾರಿಯವರಿಂದ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಾಹಾದುರ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಆರೋಗ್ಯ ತಪಾಸಣೆಗೆ ಚಾಲನೆ ಕೊಡಲಾಯಿತು.
ನಾರಾಯಣಪುರ ಸಮೂದಯ ವೈದ್ಯ ಅಧಿಕಾರಿ ಶ್ರೀಮತಿ ಮೋಹಿನಿ ಅವರಿಂದ ಅಧಿಕ ರಕ್ತದೊತ್ತಡ, ಮಧುಮೇಹ, ರಕ್ತಹೀನತೆ, ಮಕ್ಕಳ ಅಪೌಷ್ಟಿಕತೆಯ ಪರೀಕ್ಷೆ ಮಾಡಿದರು.