
Oplus_131072
ಬೀದರ:- ಜಿಲ್ಲಾ ವಿಕಲಚೇತ ಕಲ್ಯಾಣಾಧಿಕಾರಿಗಳು ಹಾಗೂ ತಾಲೂಕು ವಿಕಲಚೇತನ ಸಂಯೋಜಕರು, ಹುಮನಾಬಾದ ಮತಕ್ಷೇತ್ರದ ಶಾಸಕರ ಕಛೇರಿಯಲ್ಲಿ ಅಂಗವಿಕಲರ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮ ಏರ್ಪಡಿಸಿದ್ದು, ಈ ಕಾರ್ಯಕ್ರಮದ ಬಗ್ಗೆ ನಮಗೆ ಯಾವುದೇ ರೀತಿಯ ಮಾಹಿತಿ ನೀಡದೆ ವಿಧಾನ ಪರಿಷತ್ ಸದಸ್ಯರಿಗೆ ಸಲ್ಲಬೇಕಾದ ಸರ್ಕಾರಿ ಶಿಷ್ಠಾಚಾರವನ್ನು ಉಲ್ಲಂಘಿಸಿರುವ ದೂರಿನನ್ವಯ ವಿವರಣೆ ಸಲ್ಲಿಸಲು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾದೇವ ಮುಂಗಳ್ಳೆ ಇವರಿಗೆ ಸೂಚಿಸಲಾಗಿತ್ತು. ಸದರಿಯವರ ವಿವರಣೆಯು ಅಸಮಂಜಸವಾಗಿರುವುದು ಕಂಡುಬಂದಿರುವುದರಿಂದ ಕರ್ನಾಟಕ ನಾಗರಿಕ ಸೇವಾ (ವರ್ಗಿಕರಣ ನಿಯಂತ್ರಣ ಮತ್ತು ಮೆಲ್ಮನವಿ) ನಿಯಮಾವಳಿಗಳು 1957ರ ನಿಯಮ 10(1)(ಡಿ) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾದೇವ ಮುಂಗಳ್ಳೆ ಇವರ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಆದೇಶಿಸಿರುತ್ತಾರೆ.
ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡತಕ್ಕದಲ್ಲ. ಕೆ.ಸಿ.ಎಸ್.ಆರ್. ನಿಯಮ 98ರನ್ವಯ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆಂದು ಅವರು ಆದೇಶದಲ್ಲಿ ತಿಳಿಸಿರುತ್ತಾರೆ.