July 20, 2025

ಬೀದರ:- ಬೀದರ ಜಿಲ್ಲೆಯಾದ್ಯಂತ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ಹೆಸರು ಕಾಳನ್ನು ಖರೀದಿಸುವ ಪ್ರಕ್ರಿಯೆ ಅಕ್ಟೋಬರ್.3 ರಿಂದ ಪ್ರಾರಂಭವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಗುರುವಾರ ಖಟಕ್ ಚಿಂಚೋಳಿ ಹಾಗೂ ಕುರುಬಖೇಳ್ಳಿಯಲ್ಲಿ ಪ್ರಾರಂಭಿಸಿರುವ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಖರೀದಿ ಪ್ರಕ್ರಿಯೆಯನ್ನು ವೀಕ್ಷಿಸಿ ಮಾತನಾಡಿದರು.
ರೈತರು ಹೆಸರು ಕಾಳು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಂಡು ಗುಣಮಟ್ಟದ ಹೆಸರು ಕಾಳನ್ನು ಪ್ರತಿ ಕ್ವಿಂಟಾಲ್‌ಗೆ 8682 ರೂ. ದರದಂತೆ ನೋಂದಣಿ ಮಾಡಿಕೊಂಡ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರು ಬಸವಕಲ್ಯಾಣ ಮುಕುಲ್ ಜೈನ, ಭಾಲ್ಕಿ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರೆ, ಬೀದರ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಾನಂದ ಕುಂಬಾರ ಹಾಗೂ ಭಾಲ್ಕಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಇತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771