
ಬೀದರ:- ಬೀದರ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ 6ನೇ ಸುತ್ತಿನ ಓಂಆಅP-ಈಒಆ-ಅP ಕಾಲು ಮತ್ತು ಬಾಯಿ ಜ್ವರ ಸಾಮೂಹಿಕ ಲಸಿಕಾ ಕಾರ್ಯಕ್ರಮ ಅಕ್ಟೋಬರ್.21 ರಿಂದ ನವೆಂಬರ್20 ರವರೆಗೆ ಹಮ್ಮಿಕೊಂಡಿದ್ದು, ಪ್ರತಿಯೊಂದು ಗ್ರಾಮದಲ್ಲಿ ಪಶುವೈದರು ಹಾಗೂ ಸಿಬ್ಬಂದಿಗಳು ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳಲು ಪ್ರೋತ್ಸಾಹಿಸಿ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಮಂಗಳವಾರ ಸಂಜೆ ಬೀದರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾಲು ಮತ್ತು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಾನುವಾರು ಮಾಲೀಕರು ಪಶುವೈದರು ಹಾಗೂ ಸಿಬ್ಬಂದಿಗಳು ತಮ್ಮ ಮನೆ ಬಾಗಿಲಿಗೆ ಬಂದಾಗ ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕೆಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಡಾ.ನರಸಪ್ಪ ಎ.ಡಿ. ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ತಾಲ್ಲೂಕಿನ ಎಲ್ಲಾ ಮುಖ್ಯ ಪಶುವೈದ್ಯಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.