
ಬೀದರ:- ಭೂ ವ್ಯಾಜ್ಯಗಳಿಗೆ ಸಂಬAಧಿಸಿದ ಅರ್ಜಿಗಳನ್ನು ಶೀಘ್ರದಲೇ ವಿಲೇವಾರಿ ಮಾಡಲಾಗುವುದೆಂದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಅವರು ಶುಕ್ರವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭೂವ್ಯಾಜ್ಯಗಳ ಅಹವಾಲು ಸ್ವೀಕೃತಿ ಸಭೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
. ಗ್ರಾಮೀಣ ಭಾಗದಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಿ-ಬರಲು ಯಾವುದೇ ಸಮಸ್ಯೆ ಇರುವುದಿಲ್ಲ ಆದರೆ ಜಮೀನಿನಲ್ಲಿ ಬೆಳೆಗಳ ರಾಶಿ ಸಮಯದಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ರೈತರು ಅಹವಾಲು ಅರ್ಜಿ ಸಲ್ಲಿಸಿರುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಜಿಲ್ಲೆಯ ಒಂದು ಶಾಲೆಗೆ ಸಂಬAಧಪಟ್ಟವರು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೇಡ್ ನಿರ್ಮಾಣ ಮಾಡಿರುವ ಬಗ್ಗೆ ಮಾಹಿತಿ ಇದ್ದು ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ. ಕೆಲವರು ನಿರಂತರವಾಗಿ ಅಕ್ರಮ ಭೂ ಮಾಫಿದಲ್ಲಿ ತೊಡಗುತ್ತಿರುವ ಬಗ್ಗೆ ಮಾಹಿತಿ ಇದೆ. ಅಂತಹವರ ವಿರುದ್ಧ ಎಫ್.ಐ.ಆರ್ ಹಾಕಿ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾAತ ಪೂಜಾರಿ, ಬಸವಕಲ್ಯಾಣದ ಸಹಾಯಕ ಆಯುಕ್ತರು ಉಪಸ್ಥಿತರಿದ್ದರು.