
ಬೀದರ:- ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಿಸುವಂತೆ ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿರುವುದರಿಂದ ಜಿಲ್ಲೆಯಲ್ಲಿ ಈಗಾಗಲೇ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಪಡಿತರ ಚೀಟಿ ವಿತರಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಇನ್ನು ಬಾಕಿ ಇರುವ 7007 ನೋಂದಾಯಿತ ಇ-ಶ್ರಮ್ ಕಾರ್ಮಿಕರಿಗೆ ತ್ವರಿತಗಾಗಿ ಪಡಿತರ ಚೀಟಿ ವಿತರಣೆ ಮಾಡಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಮಿಕರ ಸಮಸ್ಯೆ ಕುರಿತು ಚರ್ಚಿಸಲು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇ-ಶ್ರಮ್ ನೋಂದಾಯಿತ ಕಾರ್ಮಿಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಮಹೇಶ ಲಕ್ಷö್ಮಣ ಕುಳಲಿ, ಆಹಾರ ಮತ್ತುನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಪ್ರವಿಣ ಬರಗಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.