
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
ಔರಾದ:- ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಖಾಲಿ ಇರುವ 36 ಅಂಗನವಾಡಿ ಕಾರ್ಯಕರ್ತೆ ಮತ್ತು 44 ಸಹಾಯಕಿಯರ ಹುದ್ದೆಗಳಿಗಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಇಲಾಖಾ ಮಾರ್ಗಸೂಚಿಯನ್ವಯ ತಾಲ್ಲೂಕು ಮಟ್ಟದ ಸಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆ ಸಮಿತಿ ಸಭೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆಯು ನಡೆಯುತ್ತದೆ.
ಬೀದರ ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ:12.11.2024 ರಂದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎಚ್ಚರಿಸುವುದೆನೆಂದರೆ, ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಗಳು ಅಥವಾ ಅನ್ಯ ವ್ಯಕ್ತಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಮುಖಾಂತರ ವಾಮಾ ಮಾರ್ಗಗಳಲ್ಲಿ ಹಣಕಾಸು ನೀಡುವ ಮೂಲಕ ಆಯ್ಕೆ ಹೊಂದಲು ಪ್ರಯತ್ನಿಸಿದಲ್ಲಿ, ಅಂತಹ ಅಭ್ಯರ್ಥಿಗಳು, ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆ ಅಧಿಕಾರಿಗಳು/ಸಿಬ್ಬಂದಿಗಳು, ಅನ್ಯವ್ಯಕ್ತಿಗಳ ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಸಂದೇಹ, ಏನಾದರೂ ಗೊಂದಲಗಳಿದ್ದರೆ/ಸಮಸ್ಯೆಗಳಿದ್ದರೆ ಕಚೇರಿ ವೇಳೆಯಲ್ಲಿ ಬೆಳಗ್ಗೆ 10.00 ರಿಂದ ಸಾಯಂಕಾಲ 5.30 ರವರೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ತಾಲೂಇನ ಶಿಶು ಅಭಿವೃದ್ಧಿ ಅಧಿಕಾರಿಗಳಾದ ಇಮಲ್ಲಪ್ಪಾ ಪ್ರಕಟನೆಯಲ್ಲಿ ತಿಳಿಸಿದ್ದರು.