July 20, 2025

ಔರಾದ್ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಕಸಾಪದ ನೂತನ ಅಧ್ಯಕ್ಷರನ್ನಾಗಿ ಬಿ.ಎಂ ಅಮರವಾಡಿ ಅವರನ್ನು ನೇಮಿಸಲಾಗಿದೆ ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ

ಕನ್ನಡ ಸಾಹಿತ್ಯ ಪರಿಷತ್ತಿನ ಹಿಂದಿನ ಅಧ್ಯಕ್ಷರಾಗಿದ್ದ ಡಾ. ಶಾಲಿವಾನ ಉದಗಿರೆ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಮರವಾಡಿ ಅವರನ್ನು ನೇಮಿಸಲಾಗಿದ್ದು, ನಿಕಟಪೂರ್ವ ಅಧ್ಯಕ್ಷ ಶಾಲಿವಾನ‌ ಉದಗೀರೆ ಅವರು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ರಿಯಾಶೀಲರಾಗಿ ಅನೇಕ ಕನ್ನಡ ಕಾರ್ಯಚಟುವಟಿಕೆಗಳನ್ನು ಸಂಘಟಿಸಿರುತ್ತಾರೆ.

ಬಿ.ಎಂ ಅಮರವಾಡಿ ಅವರು ಸ್ವತಃ ಸಾಹಿತಿಗಳಾಗಿದ್ದು,ಸುಮಾರು ದಶಕಗಳಿಂದ ಸಾಂಸ್ಕೃತಿಕ ಸಂಘಟಕರಾಗಿ ಸೇವೆ ಸಲ್ಲಿಸುತ್ತ, ಈ ಹಿಂದಿನ ಎರಡು ಅವಧಿಗೆ ಔರಾದ ತಾಲೂಕಿನ ಕಸಾಪ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ. ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.

ಸುಮಾರು ದಶಕಗಳಿಂದ ನಾಡು ನುಡಿಯ ನಿಷ್ಠಾವಂತ ಸೇವಕರಾಗಿ ಕವಿ, ಸಾಹಿತಿಗಳಾಗಿ ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇವರ ಸೇವೆ ಸಾಧನೆಗಳನ್ನು ಗುರುತಿಸಿ ಈಗಾಗಲೇ ಬೀದರ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ, ಹಾಗೂ ಜಿಲ್ಲಾ ಕಸಾಪ ವತಿಯಿಂದ ಬೀದರ ಜಿಲ್ಲಾ ಪ್ರಥಮ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿ ಕಸಾಪ ಗೌರವಿಸಿತ್ತು. ಅನೇಕ ಸಂಘ ಸಂಸ್ಥೆಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅಮರವಾಡಿಯವರನ್ನ ಕಸಾಪ ತಾಲ್ಲೂಕು ಘಟಕದ
ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಸದರಿಯವರು ಹುದ್ದೆಯನ್ನು ಸ್ವೀಕರಿಸಿ ಕಾರ್ಯ ಪ್ರವೃತ್ತರಾಗಲು ಸೂಚಿಸಿದೆ.

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771