September 8, 2025

ಬೀದರ: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಮತ್ತು ಕೇಂದ್ರ ಪುರಸ್ಕರ ಯೋಜನೆಗಳು ಮಕ್ಕಳಾ ರಕ್ಷಣಾ ಸೇವೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಬೇಟಿ ಬಚಾವು, ಬೇಟಿ ಪಡಾವು, ಪೋಕ್ಸೋ, ಬಾಲ್ಯವಿವಾಹ ನಾಪತ್ತೆ ಇತರೆ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮಹರಿಸಿ ಕಾರ್ಯನಿರ್ವಹಿಸಬೇಕೆಂದರು.
ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಪ್ರಧಾನಮಂತ್ರಿ ಮಾತೃವರ್ದನಾ ಯೋಜನೆಯಡಿ ಕಡ್ಡಾಯವಾಗಿ ಮನೆ ಮನೆ ತೆರಳಿ ಮೊದಲ ಪ್ರಸವ ಗರ್ಭಿಣಿ, ಬಾಣಂತಿ ಫಲಾನುಭವಿಗಳ ನೋಂದಣಿ ಮಾಡಿಕೊಂಡು ಅವರಿಗೆ ತಾಯಿ ಕಾರ್ಡ ವಿತರಿಸಿ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಬೇಕು. ಸ್ವಚ್ಚತಾ, ಗೃಹ ಯೋಜನೆಯಡಿ ಕಷ್ಟಕರ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಮಹಿಳೆಯರಿಗೆ ಆಶ್ರಯ, ಆಹಾರ, ಬಟ್ಟೆ, ತರಬೇತಿ ಸೇರಿದಂತೆ ಶಿಕ್ಷಣ ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರಾಗುವಂತೆ ನೋಡಿಕೊಳ್ಳಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ತುಕ, ಎತ್ತರ ಹಾಗೂ ಎಡಗೈ ತೋಳ ಅಳತೆಯ ಮಾಪನ ಮಾಡಿ ಅಪೌಷ್ಠಿಕ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಿ ಈ ಮಕ್ಕಳ ಮೇಲೆ ಹೆಚ್ಚಿನ ನೀಗಾ ವಹಿಸಬೇಕು. ಪೋಷಣ ಅಭಿಯಾನ ಯೋಜನೆಯ 0 ರಿಂದ 6 ವರ್ಷದವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಠಿಕತಾ ಮಟ್ಟವನ್ನು ಸುಧಾರಿಸಬೇಕು ಎಂದರು.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ರಕ್ಷಣಾ ಘಟಕ ವತಿಯಿಂದ ನಡೆಯುವ ವಿವಿಧ ಯೋಜನೆಗಳಾದ ಮಿಷನ್ ಶಕ್ತಿ ಯೋಜನೆ, ಒನ್ ಸ್ಟಾಪ ನಂಬರ ಯೋಜನೆ, ಶಕ್ತಿ ಸದನೆ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಟ, ಬಾಲ್ಯ ವಿವಾಹ ಇನ್ನಿತರ ಯೋಜನೆಗಳ ಕುರಿತು ಸಭೆಗೆ ಸಂಬAಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ಅಧಿಕಾರಿಗಳಾದ ಕಿಶೋರ ದುಬೆ, ಯೋಜನಾ ನಿರ್ದೇಶಕರಾದ ಜಗನ್ನಾಥ ಮೂರ್ತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರಜಿಯಾ ಬಳಬಟ್ಟಿ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಂ.ಎಸ್.ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಾದ ಗುರುರಾಜ, ತಾಲ್ಲೂಕ ಮಟ್ಟದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು, ಸಂಘ-ಸAಸ್ಥೆ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771