
ಶಹಾಪುರ (ಯಾದಗಿರಿ ): ಜಲ್ಲೆಯ ಗುರುಮಿಟ್ಕಲ್ ನ ಇಂದಿರಾನಗರದ ಬುಡ್ಗ(ಅಲೆಮಾರಿ )ಸಮುದಾಯದ ಚಿಂದಿ ಆಯುವ ಇಬ್ಬರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿ ನೀಲಹಳ್ಳಿ ಗ್ರಾಮದ ಕೆರೆಯಲ್ಲಿ ಅವರ ದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರನ್ನು ದಾಖಲಿಸಿಕೊಂಡು ಪೊಲೀಸ್ ಅಧೀಕ್ಷಕರಿಗೆ ವರದಿಯನ್ನು ಕೇಳಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದ್ರಿ ತಿಳಿಸಿದ್ದಾರೆ. ಈ ಕುರಿತು ಕರೆ ಮಾಡಿ ಮಾತನಾಡಿ ಮಾಹಿತಿ ನೀಡಿರುವ ಅವರು ಸಮಾಜ ಕಲ್ಯಾಣ ಇಲಾಖೆಯ ಮಾನ್ಯ ಸಚಿವರಿಗೆ ಹಾಗೂ ಸರ್ಕಾರದ ಕಾರ್ಯದರ್ಶಿಯವರಿಗೆ ಪತ್ರ ಬರೆದು ಆ ಮೃತ ಯುವತಿಯರ ಕುಟುಂಬಗಳಿಗೆ ಪರಿಹಾರ ನೀಡಿ ಆ ಕುಟುಂಬಗಳಿಗೆ ಆಸರೆ ಆಗುವಂತೆ ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಬಾಕ್ಸ್ :
ಗುರುಮಿಠಕಲ್ ನಡೆದ ಇಬ್ಬರು ಯುವತಿಯರ ಮೇಲಿನ ಅತ್ಯಾಚಾರ, ಕೊಲೆಯ ಘಟನೆ ಕುರಿತು ಮಾಹಿತಿ ಪಡೆಯಲಾಗಿದೆ. ಕುಟುಂಬಸ್ಥರು ಧೈರ್ಯ ಕಳೆದುಕೊಳ್ಳಬೇಡಿ ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ. ತಪ್ಪಿತಸ್ತ ಆರೋಪಿಗಳು ಯಾರೇ ಆಗಿದ್ದರು ಸಹ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು.
ಡಾ. ನಾಗಲಕ್ಷ್ಮಿ ಚೌದ್ರಿ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ.