
ಔರಾದ:-ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಇದರಿಂದ ಯಾವುದೇ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಔರಾದ್ ತಾಲ್ಲೂಕ ಅಧ್ಯಕ್ಷ ಚನ್ನಪ್ಪ ಉಪ್ಪೆ ಹೇಳಿದರು.
ಅವರು ಗುರುವಾರ ಔರಾದ ತಾಲೂಕಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳ ಮಾಹಿತಿ ಕಲೆ ಹಾಕಬೇಕು ಇದರಲ್ಲಿ ಯಾರಾದರೂ ವಂಚಿತರದರೆ ಅವರಿಗೆ ಇದರ ಲಾಭ ಪಡೆಯುವಂತೆ ಮಾಡಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕ ಉಪಾಧ್ಯಕ್ಷ ಬಾಲಶಾಹೇಬ್ ಪಾಟೀಲ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಲಾಭ ಎಲ್ಲರು ಪಡೆಯಬೇಕು ಯಾರಿಗೆ ಇದರ ಲಾಭ ಸಿಗುತ್ತಿಲ್ಲವೋ ಅವರು ಸಂಭಂದಪಟ್ಟ ಇಲಾಖೆಗೆ ಭೇಟಿ ನೀಡಿ ಪರಿಹಾರ ಕಂದುಕೊಳ್ಳಬೇಕು ಎಂದು ಹೇಳಿದರು.
ಔರಾದ ತಾಲ್ಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ ರಾವ್ ಪಾಟೀಲ್ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಯಾರಾದರೂ ಹೊರಗೂಳಿದರೆ ತಕ್ಷಣ ಸ್ಪಂದಿಸಿ ಅವರ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕರಾದ ಶಿವಕುಮಾರ್ ಘಾಟೆ, ತಾಲೂಕ ಮಟ್ಟದ ಅನುಷ್ಠಾನ ಪದಾಧಿಕಾರಿಗಳು ಸದಸ್ಯರು ಇದ್ದರು.