
ಬೀದರ: ಜಿಲ್ಲೆಯ 91 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಮೊದಲ ದಿನವಾದ ಇಂದು ಶಾಂತಿಯುತವಾಗಿ, ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಯಿತು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬೀದರ ಹಳೇ ನಗರದ (ಓಲ್ಡ್ ಸಿಟಿ) ಅಲ್ ಅಮೀನ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇಂದಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯು ಜಿಲ್ಲೆಯ ಔರಾದ್, ಬಸವಕಲ್ಯಾಣ, ಭಾಲ್ಕಿ, ಬೀದರ ಹಾಗೂ ಹುಮನಾಬಾದ ತಾಲ್ಲೂಕುಗಳಲ್ಲಿ ಪರೀಕ್ಷೆ ನಡೆದವು. ಪರೀಕ್ಷೆಗೆ ಒಟ್ಟು. 26,507 ವಿದ್ಯಾರ್ಥಿಗಳು ನೋಂದಣಿಗೊಂಡಿದ್ದು, ಈ ಪೈಕಿ 25,468 ವಿದ್ಯಾರ್ಥಿಗಳು ಹಾಜರಾಗಿದ್ದರು. 1039 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು.