
ಔರಾದ್ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮಾರ್ಚ್ 28 ರಂದು ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ ಅಮರವಾಡಿ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಅಂದು ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಸಾಯಂಕಾಲ 4 ಗಂಟೆಗೆ ನಡೆಯುವ ಸಮಾರಂಭ ಮಾಜಿ ಸಚಿವರು, ಶಾಸಕರಾದ ಪ್ರಭು ಚವ್ಹಾಣ ಉದ್ಘಾಟಿಸಲಿದ್ದಾರೆ.
ಸಾನಿಧ್ಯ ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಗುರುಬಸವ ಪಟ್ಟದ್ದೆವರು, ಅಧ್ಯಕ್ಷತೆ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪಪಂ ಅಧ್ಯಕ್ಷೆ ಸರುಬಾಯಿ ಘುಳೆ, ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ ರಂಗೇಶ ಪಾಲ್ಗೊಳ್ಳಲಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಶಾಲಿವಾನ ಉದಗಿರೆ ಪರಿಷತ್ತಿನ ಧ್ವಜ ಹಸ್ತಾಂತರ ಮಾಡಲಿದ್ದು, ಕಸಾಪ ಅಧ್ಯಕ್ಷ ಅಮರವಾಡಿ ಆಶಯ ನುಡಿ ಹೇಳಲಿದ್ದಾರೆ. ಅತಿಥಿಗಳಾಗಿ ಡಾ. ವೈಜಿನಾಥ ಬುಟ್ಟೆ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಂಡರಿ ಆಡೆ, ಪತ್ರಕರ್ತರ ಸಂಘದ ಅಧ್ಯಕ ಶಿವಾನಂದ ಮೊಕ್ತೆದಾರ್, ಮೀಡಿಯಾ ಜರ್ನಲಿಸ್ಟ್ ಯುನಿಯನ್ ಅಧ್ಯಕ್ಷ ಸಂತೋಷ ಚ್ಯಾಂಡೇಶ್ವರೆ, ಸಾಂಸ್ಕೃತಿಕ ಸಾಹಿತ್ಯಕ ಚಿಂತಕ ಜಗನ್ನಾಥ ಮೂಲಗೆ, ಕಮಲನಗರ ತಾಲೂಕು ಕಸಾಪ ಅಧ್ಯಕ್ಷ ಪ್ರಶಾಂತ ಮಠಪತಿ ಭಾಗವಹಿಸಲಿದ್ದಾರೆ.
ಅಲ್ಲದೇ ತಾಲೂಕಿನ ಎಲ್ಲ ಕನ್ನಡಪರ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಹೋರಾಟಗಾರರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.