
ಔರಾದ:-ಡಾ. ಬಿ. ಆರ್ ಅಂಬೇಡ್ಕರ್ ಅವರದು ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು ಎಂದು ಪಿಡಿಓ ಶರಣಪ್ಪ ಗಾದಗೆ ನುಡಿದರು.
ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ಆಚರಿಸಿದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜ ಸಲ್ಲಿಸಿ ಮಾತನಾಡಿದ ಅವರು
ನಮ್ಮ ಇಂದಿನ ದಿನ ನಿತ್ಯದ ಜೀವನ ನಮ್ಮ ಸಂವಿಧಾನದ ತಳಹದಿಯ ಮೇಲೆ ನಿಂತಿದೆ. ಅಂದು ಅಂಬೇಡ್ಕರ್ ಸಮಸ್ಯೆಯ ಭಾಗವಾಗಿ, ಕಷ್ಟಕಾರ್ಪಣ್ಯಗಳನ್ನು ಎದುರಿಸಿದ್ದರಿಂದಾಗಿ ಸಮಾಜದಲ್ಲಿನ ಶೋಷಿತರ ಭವಣೆಯನ್ನು ಅರಿಯಲು ಸಾಧ್ಯವಾಯಿತು. ಅಂತಹ ಶೋಷಿತರಿಗೆ ಸಮಾಜದಲ್ಲಿ ಗೌರಯುತವಾಗಿ ಬದುಕುವ ಪರಿಸ್ಥಿತಿಯನ್ನು ತರಲು ಪ್ರೇರೆಪಿಸಿತು. . , ಇಡೀ ಸಮುದಾಯವೇ ಬದಲಾವಣೆಯತ್ತಾ ಹೆಜ್ಜೆ ಹಾಕಿದರೆ ಸರ್ವರ ಏಳಿಗೆ ಖಂಡಿತ ಸಾಧ್ಯ. ಆ ಹಿನ್ನಲೆಯಲ್ಲಿ ಅಂಬೇಡ್ಕರ್‍ರವರ ಚಿಂತನೆ ಸದಾ ನಮಗೆಲ್ಲರಿಗೂ ಉತ್ತಮ ಮಾರ್ಗದರ್ಶಿ ಎಂದರು.
ಗ್ರಾಮ ಪಂಚಾಯತ್ ಸದಸ್ಯ ವಿಠ್ಠಲ್ ಬುದ್ರೆ ಮಾತನಾಡಿ, ಅಸ್ಪ್ರಶ್ಯತೆಯ ಭಾವನೆ ಮೊದಲು ನಮ್ಮ ಮನಸ್ಸಿನಿಂದ ತೊಲಗಬೇಕು. ನಮ್ಮ ಮನಸ್ಸಿನೊಳಗೆ ಅಸ್ಪ್ರಶ್ಯರು ಎಂದು ಇದ್ದ ವರ್ಗ, ಈಗಲೂ ಅದೇ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದೆ. ನಾವು ವಿಜ್ಞಾನ ತಂತ್ರಜ್ಞಾನದಲ್ಲಿ ಎಷ್ಟೇ ಮುಂದುವರೆದರೂ, ವೇಸ್ಟ್ ಮ್ಯಾನೇಜ್ಮೇಂಟ್ ಸಿಸ್ಟಮ್‍ನಲ್ಲಿ ಯಾವುದೇ ಬದಲಾವಣೆಗಳಾಗಲಿಲ್ಲ. ಪ್ರತಿಯೊಬ್ಬರ ಜೀವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪೀಳಿಗೆಗೆ ಶಿಕ್ಷಣದ ಬಗ್ಗೆ ಪ್ರಾಮುಖ್ಯತೆ ಮಾಡಬೇಕು. ಜೀವನದಲ್ಲಿ ಮುಂದೆ ಬರಬೇಕು ಆದರೂ ಅದಕ್ಕೆ ಶಿಕ್ಷಣ ಬಹಳ ಪ್ರಾಮುಖ್ಯತೆ ವಾಗಿದೆ ಎಂದರು.ಪಂ ಅಧ್ಯಕ್ಷೆ ಸುಮನಾಬಾಯಿ ಪಾಟೀಲ್, ಪಂಚ ಗ್ಯಾರಂಟಿ ಯೋಜನೆ ಸದಸ್ಯ ಎಂ ಡಿ ಸಲಾವೊದ್ದಿನ್, ನೌನಾಥ ಭಾಲ್ಕೆ, ಅಭಂಗರಾವ್ ತಾಡಮಲ್ಲೆ, ರಾಜು ಮಹಾರಾಜವಾಡಿ, ದತ್ತಾತ್ರಿ ಗಾಯಕವಾಡ, ದಯಾನಂದ, ಅನಿಲ್, ಸಂತೋಷ್, ಬಾಲಾಜಿ ಪಾಟೀಲ್, ಕಾರ್ಯದರ್ಶಿ ಜಗದೇವಿ, ಶಿವಕುಮಾರ್ ಪಾರಾ, ಪತ್ರಕರ್ತ ಅಹಮದ್ ಜಂಬಗಿ ಇತರರಿದ್ದರು..