
Oplus_131072
ಔರಾದ್ : ತಾಲ್ಲೂಕಿನ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಂಡರಿ ಆಡೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ90ಕ್ಕಿಂತ ಅಧಿಕ ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, ಅರ್ಹ ಮಕ್ಕಳು ಅಗತ್ಯ ದಾಖಲಾತಿಯೊಂದಿಗೆ ನಿಗದಿತ ದಿನದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
https://ksgeanews.blogspot.com ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.