July 20, 2025
  1. ಔರಾದ:-ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಭಾಗವಾಗಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸೆ.20ರಂದು ಕಮಲನಗರ ತಾಲ್ಲೂಕಿನ ಠಾಣಾಕುಶನೂರ, ಕಮಲನಗರ ಹಾಗೂ ಬೆಳಕುಣಿ ಗ್ರಾಮಗಳಲ್ಲಿ ಸಂಚರಿಸಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್ ಪ್ರಮುಖರ ಸಭೆ ನಡೆಸಿದರು.

ದೇಶಾದ್ಯಂತ ಬಿಜೆಪಿ ಸದಸ್ಯತಾ ಅಭಿಯಾನ ವೇಗವಾಗಿ ನಡೆಯುತ್ತಿದೆ. ದೇಶದಲ್ಲಿ ಒಟ್ಟು 10 ಕೋಟಿ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ. ಅದರಂತೆ ಎಲ್ಲ ನಾಯಕರು ಕೆಲಸ ಮಾಡುತ್ತಿದ್ದಾರೆ. ನಮ್ಮ ಕ್ಷೇತ್ರದಿಂದ 1.20 ಲಕ್ಷ ಸದಸ್ಯರ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಎಲ್ಲ ಕಾರ್ಯಕರ್ತರು ಸಮರ್ಪಣಾ ಭಾವನೆಯಿಂದ ಕೆಲಸ ಮಾಡಬೇಕೆಂದು ಹೇಳಿದರು.

ಇದು ಯಾರ ವೈಯಕ್ತಿಕ ಕೆಲಸವೂ ಅಲ್ಲ. ಇದೊಂದು ಪಕ್ಷದ ಮತ್ತು ದೇಶದ ಹಿತದೃಷ್ಟಿಯಿಂದ ಮಾಡಬೇಕಾದ ಕೆಲಸವಾಗಿದ್ದು, ಯಾರೊಬ್ಬರೂ ತಾತ್ಸಾರ ಭಾವನೆಯಿಂದ ನೋಡುವುದು ಬೇಡ. ಮನೆ-ಮನೆಗೆ ಭೇಟಿ ನೀಡಿ ಸದಸ್ಯತ್ವ ಅಭಿಯಾನ ನಡೆಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಅವರು ಬಿಜೆಪಿ ಸದಸ್ಯತಾ ಅಭಿಯಾನ ಎಂದರೇನು ? ಮೊಬೈಲ್‌ನಲ್ಲಿ ನೋಂದಾಯಿಸುವುದು ಹೇಗೆ ?, ಸದಸ್ಯತ್ವ ಪ್ರಮಾಣ ಪತ್ರ ಪಡೆಯುವುದು ಹೇಗೆ ?, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಪ್ರಮುಖರು ಮತ್ತು ಕಾರ್ಯಕರ್ತರ ಜವಾಬ್ದಾರಿಗಳೇನು ಎಂಬುದರ ಬಗ್ಗೆ ವಿವರಣೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ ಸೇರಿದಂತೆ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771