September 7, 2025

ಔರಾದ :-ಒಳಮೀಸಲಾತಿ ಜಾರಿಗೊಳಿಸಲು ನ್ಯಾ.ನಾಗಮೋಹನದಾಸ್ ಸಮಿತಿಯು ಸಲ್ಲಿಸಿದ ವರದಿಯನ್ನು ವಿರೋಧಿಸಿ ಬಲಗೈ ಸಮುದಾಯವು ಸಭೆ ನಡೆಸಿದ್ದು, ಆ.14 ರಂದು ಬೀದರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕರು ಸುಭಾಷ ಲಾಧಾ ಇವರು ತಿಳಿಸಿದ್ದರು.

ಒಳಮೀಸಲಾತಿಗೆ ಸಂಬಂಧಿಸಿದ ನ್ಯಾನಾಗಮೋಹನದಾಸ್‌ ಅವರ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಉದ್ದೇಶಪೂರ್ವಕವಾಗಿ ಅನ್ಯಾಯ ಮಾಡಲಾಗಿದೆ.

ಇದರಿಂದಾಗಿ ನಮ್ಮ ಸಮುದಾಯದ ಭವಿಷ್ಯದ ಪೀಳಿಗೆಗೆ ತುಂಬಾ ತೊಂದರೆಯಾಗಲಿದೆ. ಇದರಿಂದಾಗಿ ನಾವು ಈ ವರದಿ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದನ್ನು ಜಾರಿಯಾಗಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಆ.14 ರ ಬೆಳಿಗ್ಗೆ ಸುಮಾರು 11 ಗಂಟೆಗೆ ಬೀದರ ನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು,ನಗರದ ಶಾಹ ಗಂಜ್ ಅಂಬೇಡ್ಕರ್ ಭವನ ದಿಂದ ಜಿಲ್ಲಾ ಅಧಿಕಾರಿಗಳ ಕಛೇರಿ ವರೇಗೆ ಮೇರವಣಿಗೆ ಮುಖಾಂತರ ಹೋಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು.

ಪ್ರತುಭಟನೆಯಲ್ಲಿ ತಾಲ್ಲೂಕಿನ ಸಾವಿರಾರು ಜನರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಸಮುದಾಯ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771