
ಕಮಲನಗರ:- ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ
ರಸ್ತೆ, ಸಂಪರ್ಕ ಸೇತುವೆ, ಕೆರೆ, ಕಟ್ಟೆಗಳಿಗೆ ಆಗಿರುವ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ ಬದೋಲೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ದಾಬಕಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಖನಾಪೂರ, ಗಣೇಶಪೂರ ಹಾಗೂ ಚಿಕ್ಲಿ(ಯು) ಗ್ರಾಮ ಪಂಚಾಯತ ವ್ಯಾಪ್ತಿಯ ನಂದಿ ಬಿಜಲಗಾಂವ ತಾಂಡಾ, ನಂದಿ ಬಿಜಲಗಾಂವ ಗ್ರಾಮದ ಕೆರೆಗೆ ಭೇಟಿ ನೀಡಿ ಗ್ರಾಮದ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅತಿವೃಷ್ಠಿಯಿಂದಾಗಿ ಕೆಲವು ಮನೆಗಳಿಗೆ ನೀರು ನುಗ್ಗಿರುವುದು, ಮನೆ ಕುಸಿದಿರುವುದನ್ನು ಗಮನಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಇದೇ ವೇಳೆ ಎಸ್.ಪಿ. ಪ್ರದೀಪ ಗುಂಟೆ,ಮಹಮ್ಮದ್ ಶಕೀಲ್,ತಹಶೀಲ್ದಾರ್ ಅಮೀತಕುಮಾರ ಕುಲಕರ್ಣಿ,ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಹಣಮಂತರಾಯ ಕೌಟಗೆ , ಕೃಷಿ ಅಧಿಕಾರಿ ಆನಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.