ನವದೆಹಲಿ: ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ ಸಾಗರ ಈಶ್ವರ ಖಂಡ್ರೆ ಅವರು ಸಂಸತ್ ಕಚೇರಿಯಲ್ಲಿ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ಬೀದರ ಜಿಲ್ಲೆಯನ್ನು ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ (PMDDKY) ಸೇರಿಸುವಂತೆ ಮನವಿ ಪತ್ರ ಹಾಗೂ ವಿವರವಾದ ವರದಿಯನ್ನು ಸಲ್ಲಿಸಿದರು.
ಈ ಯೋಜನೆಯಡಿಯಲ್ಲಿ ದೇಶದ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆರು ವರ್ಷಗಳ ಕಾಲ ಪ್ರತಿ ವರ್ಷ ₹24,000 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಒಟ್ಟು ₹1.44 ಲಕ್ಷ ಕೋಟಿ ರೂಪಾಯಿ ಈ ಯೋಜನೆಗೆ ಮೀಸಲಿರಲಿದೆ.
- ಈ ಯೋಜನೆಯ ಅನುಷ್ಠಾನದಿಂದ ಬೀದರ್ ಜಿಲ್ಲೆಯ ಕೃಷಿ ಕ್ಷೇತ್ರ ಮತ್ತಷ್ಟು ಬಲ ಪಡೆದು, ರೈತರಿಗೆ ಉತ್ತಮ ಅವಕಾಶಗಳು, ಆಧುನಿಕ ಕೃಷಿ ಸೌಲಭ್ಯಗಳು ಹಾಗೂ ಸಮೃದ್ಧ ಜೀವನದ ದಾರಿ ಸುಗಮವಾಗಲಿದೆ ಎಂದು ಸಂಸದರು ವಿಶ್ವಾಸ ವ್ಯಕ್ತಪಡಿಸಿದರು.
ಬೀದರ್ ಕ್ಷೇತ್ರವನ್ನು ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ (PMDDKY) ಸೇರಿಸುವಂತೆ ಸಂಸದ ಸಾಗರ ಖಂಡ್ರೆ ಮನವಿ.
ನವದೆಹಲಿ: ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ ಸಾಗರ ಈಶ್ವರ ಖಂಡ್ರೆ ಅವರು ಸಂಸತ್ ಕಚೇರಿಯಲ್ಲಿ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ಬೀದರ ಜಿಲ್ಲೆಯನ್ನು ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ (PMDDKY) ಸೇರಿಸುವಂತೆ ಮನವಿ ಪತ್ರ ಹಾಗೂ ವಿವರವಾದ ವರದಿಯನ್ನು ಸಲ್ಲಿಸಿದರು.
ಈ ಯೋಜನೆಯಡಿಯಲ್ಲಿ ದೇಶದ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಆರು ವರ್ಷಗಳ ಕಾಲ ಪ್ರತಿ ವರ್ಷ ₹24,000 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಒಟ್ಟು ₹1.44 ಲಕ್ಷ ಕೋಟಿ ರೂಪಾಯಿ ಈ ಯೋಜನೆಗೆ ಮೀಸಲಿರಲಿದೆ.
ಈ ಯೋಜನೆಯ ಅನುಷ್ಠಾನದಿಂದ ಬೀದರ್ ಜಿಲ್ಲೆಯ ಕೃಷಿ ಕ್ಷೇತ್ರ ಮತ್ತಷ್ಟು ಬಲ ಪಡೆದು, ರೈತರಿಗೆ ಉತ್ತಮ ಅವಕಾಶಗಳು, ಆಧುನಿಕ ಕೃಷಿ ಸೌಲಭ್ಯಗಳು ಹಾಗೂ ಸಮೃದ್ಧ ಜೀವನದ ದಾರಿ ಸುಗಮವಾಗಲಿದೆ ಎಂದು ಸಂಸದರು ವಿಶ್ವಾಸ ವ್ಯಕ್ತಪಡಿಸಿದರು.