
ಬೀದರ:- ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭಂಗೂರ ಹಾಗೂ ಸಿಂದೊಲ್ ಮಾರ್ಗ ಮಧ್ಯ ಇರುವ ಸೇತುವೆ ಸಂಪೂರ್ಣ ಜಲಾವೃತವಾಗಿದ್ದು ಸ್ಥಳಕ್ಕೆ ಗುರುವಾರ ಬೀದರ ತಾಲ್ಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮೊನ್ನೆಚ್ಚರಿಕೆ ಕ್ರಮವಾಗಿ ಆ ಮಾರ್ಗದಿಂದ ಯಾರು ಸಂಚರಿಸದಂತೆ ಕೆಳ ಹಂತದ ಸಿಬ್ಬಂದಿಗಳಿಗೆ ಸೂಚಿಸಿ ಬ್ಯಾರಿಕೆಡ್ ಅಳವಡಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕ ಪಂಚಾಯತ್ ಇತರೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.