March 21, 2026

ಔರಾದ್ : ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಅಭಿನಂದನಾ ಸಮಾರಂಭ ಕರ್ನಾಟಕ ಫಾರ್ಮಸಿ ಕಾಲೇಜು ಆವರಣದಲ್ಲಿ ನಡೆಯಲಿದ್ದು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಆನಂದ ಪಿ.ದ್ಯಾಡೆ ಮನವಿ ಮಾಡಿದ್ದಾರೆ.

 

  • ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಮ್ಮ ಜಿಲ್ಲೆಯ ಹೆಮ್ಮೆಯ ನಾಯಕ ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸುಕೊಂಡು ಹೋಗುವ ಖಂಡ್ರೆ ಪರಿವಾರದ ಕಣ್ಮಣಿ ಈಶ್ವರ ಖಂಡ್ರೆ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಜಿಲ್ಲೆಗೆ ಹೆಮ್ಮೆಯ ವಿಷಯ. ಇಡೀ ರಾಜ್ಯವ್ಯಾಪಿ ಅಭಿನಂದನಾ ಸಮಾರಂಭ ಜರುಗುತ್ತಲಿದ್ದು ಅವರ ತವರು ಕ್ಷೇತ್ರ ಬೀದರನಲ್ಲಿ ಅದ್ದೂರಿಯಾಗಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಗರದ ಬಸವೇಶ್ವರ ವೃತ್ತದಲ್ಲಿ ಸಾಯಂಕಾಲ 04 ಗಂಟೆಗೆ ಭವ್ಯ ಮೆರವಣಿಗೆ ನಡೆಯಲಿದೆ ಸಾಯಂಕಾಲ 06 ಗಂಟೆಗೆ ಕರ್ನಾಟಕ ಫಾರ್ಮಸಿ ಕಾಲೇಜು ಆವರಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ ಪ್ರಯುಕ್ತ ಜಿಲ್ಲೆಯ ವೀರಶೈವ ಲಿಂಗಾಯತ ಸಮಾಜ ಬಾಂಧವರು ಪಕ್ಷ ಭೇದ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜದ ಶಕ್ತಿ ಪ್ರದರ್ಶನ ತೋರಬೇಕಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771