ಔರಾದ: 2026ನೇ ಸಾಲಿನ ರಾಜ್ಯ ಸರಕಾರಿ
ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಮೊದಲ ಪ್ರಯತ್ನದಲ್ಲಿ ಪಾಸಾದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ತಂದೆ-ತಾಯಿ ರಾಜ್ಯ.https:// powermedia.info ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು.
ಸಂಘ ನಿಗದಿಪಡಿಸಿದ ನಮೂನೆಯಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರು/ತಾಲೂಕು ಅಧ್ಯಕ್ಷರಿಂದ ದೃಡೀಕರಿಸಿ ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸಲು ಇದೇ ಮೇ25 ಕೊನೆಯ ದಿನವಾಗಿದೆ ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಪಂಡರಿ ಆಡೆ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
